ಶಿವಮೊಗ್ಗ: ಕೊರೊನಾ ಲೆಕ್ಕ ಕೊಡಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ನಗರ ಯುವ ಕಾಂಗ್ರೆಸ್ ವತಿಯಿಂದ ನಗರದ ಮುಖ್ಯ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಮಹಾಮಾರಿಗೆ ರಾಜ್ಯವೆ ತತ್ತರಿಸಿ ಹೋಗಿದ್ದು, ಇಂತಹ ಸಂದರ್ಭದಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಮಾಸ್ಕ್, ಸ್ಯಾನಿಟೈಸರ್, ವೆಂಟಿಲೇಟರ್, ಪಿಪಿಇ ಕಿಟ್ ಹೀಗೆ ಎಲ್ಲಾ ವೈದ್ಯಕೀಯ ಪರಿಕರಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಲೆಕ್ಕ ನೀಡಿ ಎಂದರೆ ಒಬ್ಬಬ್ಬ ಸಚಿವರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಜನರಲ್ಲಿ ಅನುಮಾನ ಮೂಡಿಸುತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಿ ರಾಜ್ಯದ ಜನಕ್ಕೆ ಕೊರೊನಾ ಖರ್ಚಿನ ಲೆಕ್ಕ ನೀಡಬೇಕು. ಇಲ್ಲವಾದರೆ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಿ ಲೆಕ್ಕ ಕೇಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.