ಕೊಪ್ಪಳ: ಜಿಲ್ಲೆಯಲ್ಲಿ ಇಂದು 197 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 117, ಕೊಪ್ಪಳ ತಾಲೂಕಿನಲ್ಲಿ 40, ಕುಷ್ಟಗಿ ತಾಲೂಕಿನಲ್ಲಿ 23 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಒಟ್ಟು ಜಿಲ್ಲೆಯಲ್ಲಿ 6650 ಕ್ಕೆ ಏರಿಕೆಯಾಗಿದೆ.
ಮೃತರು :
ಇಂದು 10 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 157 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಗುಣಮುಖ:
ಇಂದು 123 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4810 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1434 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ.
ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.