ಬಂಟ್ವಾಳ: ಇಂದು ಒಂದೇ ದಿನ 381 ಮಂದಿ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ 1300ರಷ್ಟು ಸಕ್ರಿಯ ಪ್ರಕರಣಗಳು ಬಂಟ್ವಾಳದಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ.
ಸೋಂಕು ತಗುಲಿದವರ ಪೈಕಿ 356 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಟ್ವಾಳ ಪುರಸಭೆ ವ್ಯಾಪ್ತಿಯೊಂದರಲ್ಲಿಯೇ 70ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರುವುದು ಗುರುವಾರ ಗೊತ್ತಾಗಿದೆ. ಬುಧವಾರ ತಾಲೂಕಿನಲ್ಲಿ 93 ಮಂದಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮನವಿ ಮಾಡಿದ್ದಾರೆ.