ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 47 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,243ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಇಂದು 20 ಜನರು ಗುಣಮುಖರಾಗಿ ಬಿಡುಗಡೆಯಾದರು. ಈವರೆಗೆ ಜಿಲ್ಲೆಯಲ್ಲಿ ಒಟ್ಟು 547 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 25, ಕಡೂರು ತಾಲೂಕಿನಲ್ಲಿ 02, ತರೀಕೆರೆ ತಾಲೂಕಿನಲ್ಲಿ 13, ಮೂಡಿಗೆರೆ ತಾಲೂಕಿನಲ್ಲಿ 04, ಶೃಂಗೇರಿ ತಾಲೂಕಿನಲ್ಲಿ 01, ಅಜ್ಜಂಪುರದಲ್ಲಿ 02 ಜನರಿಗೆ ಸೋಂಕು ಪತ್ತೆಯಾಗಿದೆ.
ಸೋಂಕಿಗೆ ಇಂದು ಒಬ್ಬರು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸೋಂಕು ಕಂಡುಬಂದ ಪ್ರದೇಶಗಳಿಗೆ ಭೇಟಿ ನೀಡಿ ಸಂಪೂರ್ಣ ಸೀಲ್ ಡೌನ್ ಮಾಡಿದೆ. ಜಿಲ್ಲೆಯಲ್ಲಿ ಒಟ್ಟು 671 ಸಕ್ರಿಯ ಪ್ರಕರಣಗಳಿವೆ.