ETV Bharat / state

33 ಬಾರಿ ಸಂಚಾರ ನಿಯಮ ಉಲ್ಲಂಘನೆ: ಸವಾರನಿಗೆ ಬಿತ್ತು ಭಾರೀ ದಂಡ - traffic rules violation news

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ವಾಹನ ಓಡಿಸುವಾಗ ಮೊಬೈಲ್ ಬಳಕೆ ಸೇರಿದಂತೆ 33 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬರಿಗೆ ಸಂಚಾರ ನಿಯಮ ಪೊಲೀಸರು ಭಾರೀ ದಂಡ ವಿಧಿಸಿದ್ದಾರೆ.

Fine
Fine
author img

By

Published : Oct 15, 2020, 11:12 AM IST

ಬೆಂಗಳೂರು: ಟ್ರಾಫಿಕ್ ಪೊಲೀಸರು ಅಲರ್ಟ್ ಆಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ 33 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ 12,500 ರೂಪಾಯಿ ದಂಡ ಹಾಕಿ, ಹಣ ವಸೂಲಿ ಮಾಡಿದ್ದಾರೆ.

ಹೆಚ್‌ಎಎಲ್ ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆಗೆ ಪೊಲೀಸರು ನಿರತರಾಗಿದ್ದ ವೇಳೆ, ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಚನ್ನಪ್ಪ ಎನ್ನುವ ವ್ಯಕ್ತಿಯನ್ನು ವಿಚಾರಣೆ ನಡೆಸಿ,12,500 ರೂಪಾಯಿ ದಂಡ ವಿಧಿಸಿದ್ದಾರೆ.

ಇನ್ನು ದಂಡ ವಸೂಲಿ ಬಗ್ಗೆ ಟ್ರಾಫಿಕ್ ಹಿರಿಯಾಧಿಕಾರಿಗಳು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದು, ಪ್ರತಿಯೊಬ್ಬರು ನಿಯಮಗಳನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.