ಚಿತ್ರದುರ್ಗ: ಇಂದು ಜಿಲ್ಲೆಯಲ್ಲಿ ಕೋವಿಡ್‌ಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಉಸಿರಾಟದ ತೊಂದರೆಯಿಂದ 50 ವರ್ಷದ ಮಹಿಳೆ ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಚಿತ್ರದುರ್ಗ ನಗರದ ತಾಜ್‌ಪೀರ್ ಲೇಔಟ್ ನಿವಾಸಿ ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಜುಲೈ 15ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಅಧಿಕೃತ ಘೋಷಣೆ ಮಾಡಬೇಕಿದೆ.