ಬೆಂಗಳೂರು: ಕೊರೊನಾ ಹಿನ್ನೆಲೆ ಕಳೆದ ಅರು ತಿಂಗಳಿಂದ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ ಗಳು ಬಂದ್ ಆಗದ್ದು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಎಂಟು ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್ ಜೈರಾಜ್ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ದೇಶಾದ್ಯಂತ ಅನ್ ಲಾಕ್ ಘೋಷಣೆ ಮಾಡಿದೆ. ಅದರೆ ಚಿತ್ರಮಂದಿಗಳನ್ನು ಓಪನ್ ಮಾಡಲು ಇನ್ನೂ ಗ್ರೀನ್ ಸಿಗ್ನಿಲ್ ಕೊಟ್ಟಿಲ್ಲ. ಹೀಗಾಗಿ ಎಲ್ಲಾ ಚಿತ್ರಮಂದಿರಗಳ ಮಾಲೀಕರು ಥಿಯೇಟರ್ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡುವಂತೆ ಮನವಿ ಮಾಡಿದ್ದರು.
ಇದೀಗ ಮಾಲೀಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬರುವ ಮಂಗಳವಾರ ಎಂಟು ರಾಜ್ಯಗಳ ಚಲನಚಿತ್ರ ವಾಣಿಜ್ಯ
ಮಂಡಳಿಗಳ ಜೊತೆ ಜೂಮ್ ಮೀಟಿಂಗ್ ನಡೆಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಸೌತ್ ಇಂಡಿಯಾದ ಎಲ್ಲಾ ರಾಜ್ಯಗಳ ವಾಣಿಜ್ಯ ಮಂಡಳಿಗಳು ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಈ ಜೂಮ್ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ನಾವು ಈಗಾಗಲೇ ಚಿತ್ರ
ಮಂದಿರಗಳನ್ನು ಓಪನ್ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, 8ನೇ ತಾರೀಖಿನಂದು ನಡೆಯುವ ಸಭೆಯಲ್ಲಿ ಚಿತ್ರಮಂದಿರಗಳನ್ನು ರೀ ಓಪನ್ ಮಾಡಲು ದಿನಾಂಕ ನಿಗದಿ ಮಾಡಲಿದ್ದಾರೆ ಎಂದು ಜೈರಾಜ್ ತಿಳಿಸಿದ್ದಾರೆ.