ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ವಿರುದ್ಧ ಮಾರ್ಫಡ್ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾರಣ ಮಾಜಿ ಮೇಯರ್ ಶಹತಾಜ್ ಖಾನಂ ವಿರುದ್ಧ ವೈಟ್ ಫೀಲ್ಡ್ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರು ರಾಜಕೀಯ ನಾಯಕರ ಫೋಟೋ ತಿರುಚಿ, ಸಾರ್ವಜನಿಕರಿಗೆ ಮುಜುಗರ ಉಂಟುಮಾಡುವಂತೆ ಪೋಸ್ಟ್ ಮಾಡಲಾಗಿತ್ತು ಎನ್ನಲಾಗಿದೆ. ಇದನ್ನು ಗಮನಿಸಿದ ಕಿರಣ್ ಆರಾಧ್ಯ ಎಂಬುವರು ದೂರು ನೀಡಿದ್ದು, ದೂರಿನ ಅನ್ವಯ ವೈಟ್ ಫೀಲ್ಡ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಹಿಂದೆ ನಗರ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಮಾರ್ಫಡ್ ಫೋಟೋ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ರು. ಆದ್ರು ನಿಯಮ ಉಲ್ಲಂಘನೆ ಮಾಡಿ ಪ್ರತಿಷ್ಠಿತ ವ್ಯಕ್ತಿಗಳ ಫೋಟೋ ಪೋಸ್ಟ್ ಮಾಡಿದ ಕಾರಣ ಸದ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.