ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜಭವನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11.30ಕ್ಕೆ ರಾಜಭವನಕ್ಕೆ ಭೇಟಿ ನೀಡಲಿರುವ ಸಿಎಂ, ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗಿದೆ. ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಸೋಂಕು ಹರಡುವಿಕೆ ತಡೆಗೆ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ರಾಜ್ಯಪಾಲರಿಗೆ ಸಿಎಂ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ಕೊರೊನಾ ಸಂಬಂಧ ವೈದ್ಯಕೀಯ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬೆನ್ನಲ್ಲೇ ಸಿಎಂ ರಾಜಭವನಕ್ಕೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.