ಬೆಂಗಳೂರು: ರಂಗಭೂಮಿ ಹಿರಿಯ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ರಕ್ತರಾತ್ರಿ ನಾಟಕದಲ್ಲಿನ ದ್ರೌಪದಿಯ ಪಾತ್ರ, ಕುರುಕ್ಷೇತ್ರ ನಾಟಕದ ಗಾಂಧಾರಿಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಮನೆ ಮಾತಾಗಿದ್ದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಇವರ ನಿಧನದಿಂದ ರಂಗಭೂಮಿಯು ಅನರ್ಘ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ನಿಧನಕ್ಕೆ ಸಿಎಂ ಸಂತಾಪ - CM Yadiyurappa gave condoles
ರಂಗಭೂಮಿ ಹಿರಿಯ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ರಂಗಭೂಮಿ ಹಿರಿಯ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ರಕ್ತರಾತ್ರಿ ನಾಟಕದಲ್ಲಿನ ದ್ರೌಪದಿಯ ಪಾತ್ರ, ಕುರುಕ್ಷೇತ್ರ ನಾಟಕದ ಗಾಂಧಾರಿಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಮನೆ ಮಾತಾಗಿದ್ದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಇವರ ನಿಧನದಿಂದ ರಂಗಭೂಮಿಯು ಅನರ್ಘ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
TAGGED:
CM Yadiyurappa gave condoles