ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಮೆ ಮಾಡಿದರು.
ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಮನೋಜ್ ರಾಜನ್, ಕಂದಾಯ ಇಲಾಖೆ (ಪರಿಹಾರ ಮತ್ತು ಪುನರ್ವಸತಿ) ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಉಪಸ್ಥಿತಿಯಲ್ಲಿ ಇನ್ ಪುಟ್ ಸಬ್ಸಿಡಿ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಿದರು.