ETV Bharat / state

ಕೊರೊನಾ ಕುರಿತು ಇಂದು ಜಿಲ್ಲಾಡಳಿತಗಳ ಜೊತೆ ಸಿಎಂ ವಿಡಿಯೋ ಸಂವಾದ - ಕೊರೊನಾ ಕುರಿತು ಇಂದು ಜಿಲ್ಲಾಡಳಿತಗಳ ಜೊತೆ ಸಿಎಂ ವಿಡಿಯೋ ಸಂವಾದ

ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಕೆ, ಬೆಡ್​​​ಗಳ ಕೊರತೆ ಸೇರಿದಂತೆ ಜಿಲ್ಲೆಗಳಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಲಿದ್ದಾರೆ.

Yediyurappa
Yediyurappa
author img

By

Published : Sep 10, 2020, 9:25 AM IST

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ನಿಯಂತ್ರಣ ಕುರಿತು ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಲಿದ್ದಾರೆ.

ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಕೆ, ಬೆಡ್​ಗಳ ಕೊರತೆ ಸೇರಿದಂತೆ ಜಿಲ್ಲೆಗಳಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಅವಲೋಕನ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಲಿದ್ದು, ಜಿಲ್ಲಾಧಿಕಾರಿಗಳು,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಆಯಾ ಜಿಲ್ಲೆಯಲ್ಲಿ ಇರುವ ಕೊರೊನಾ ಸೋಂಕಿನ ಪ್ರಮಾಣ, ಪ್ರತಿ ದಿನದ ಪಾಸಿಟಿವ್ ಕೇಸ್ ಸರಾಸರಿ, ಗುಣಮುಖರಾಗುತ್ತಿರುವವರ ಸರಾಸರಿ ಪ್ರಮಾಣ, ಕೊರೊನಾ ಬೆಡ್​​ಗಳ ಲಭ್ಯತೆ, ಐಸಿಯು, ಆಕ್ಸಿಜನ್ ಬೆಡ್​​​ಗಳ ಪ್ರಮಾಣ, ಚಿಕಿತ್ಸೆ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ಇತ್ತೀಚೆಗೆ ಆಕ್ಸಿಜನ್, ಬೆಡ್​​ಗಳ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.