ETV Bharat / state

ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ: ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ಆಸೆ - Cm b.s yediyurappa rajabhavana visit news

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಭವನಕ್ಕೆ ದಿಢೀರ್ ಭೇಟಿ ನೀಡಿ, ರಾಜ್ಯಪಾಲರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ‌.

Cm
Cm
author img

By

Published : Jul 31, 2020, 2:04 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜಭವನಕ್ಕೆ ದಿಢೀರ್ ಭೇಟಿ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜ್ಯಪಾಲರ ಬುಲಾವ್ ಮೇರೆಗೆ ರಾಜಭವನಕ್ಕೆ ಭೇಟಿ ನೀಡಿದ್ದಾರೆ.

ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಂದ ಮಾಹಿತಿ ಪಡೆದು ರಾಜ್ಯಪಾಲರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಸಹ ಸಿಎಂ, ರಾಜ್ಯಪಾಲರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದರು. ಅದರ ಜೊತೆ ಪರಿಷತ್ ನಾಮನಿರ್ದೇಶಿತ ಸದಸ್ಯರ ಪಟ್ಟಿಗೆ ಒಪ್ಪಿಗೆ ಪಡೆದುಕೊಂಡು ಬಂದಿದ್ದರು. ಹಾಗಾಗಿ ಇಂದಿನ ಭೇಟಿ ಸಹ ಸಾಕಷ್ಟು ಕುತೂಹಲ ಮೂಡಿಸಿದೆ.

ಸಿಎಂ ರಾಜಭವನಕ್ಕೆ ಭೇಟಿ ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಇತ್ತೀಚೆಗೆ ಬಿಜೆಪಿ ಸೇರಿರುವ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್.ಶಂಕರ್ ಜೊತೆ ಸಿ.ಪಿ ಯೋಗೇಶ್ವರ್, ಉಮೇಶ್ ಕತ್ತಿ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಆಗಸ್ಟ್ ಎರಡನೇ ವಾರದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಧ್ಯತೆ ಇದೆ. ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಭೇಟಿ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.