ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ನಗರದ ರೇಡಿಯೋ ಪಾರ್ಕಿನ ನಿವಾಸಿ 65 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ತಿಳಿಸಿದ್ದಾರೆ.
ಅಧಿಕ ರಕ್ತದೊತ್ತಡ, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯನ್ನ ನಗರದ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಗಂಟಲು ದ್ರವ್ಯ (ಸ್ವ್ಯಾಬ್ ಕಲೆಕ್ಟ್) ಸಂಗ್ರಹಣೆ ಮಾಡಿ ಪರೀಕ್ಷಿಸಿದಾಗ, ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಎಸ್ ಒಪಿ ಪ್ರಕಾರ ಮಹಿಳೆಯ ಅಂತ್ಯಕ್ರಿಯೆಯನ್ನ ನಡೆಸಲಾಗುವುದು ಎಂದು ಡಿಸಿ ಎಸ್. ಎಸ್. ನಕುಲ್ ತಿಳಿಸಿದ್ದಾರೆ.
ಗಣಿಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಂಭತ್ತನೇ ಬಲಿ! - ಕೊರೊನಾ ವೈರಸ್
ರಾಜ್ಯದಲ್ಲಿ ಕೋವಿಡ್ ಪೀಡಿತರ ಸಾವಿನ ಸಂಖ್ಯೆ ಹೆಚ್ಚಾಳವಾಗುತ್ತಿದೆ. ಇಂದು ಕೂಡಾ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸೋಂಕಿತ ಮಹಿಳೆ ಮಹಾಮಾರಿಗೆ ಬಲಿಯಾಗಿದ್ದಾರೆ.