ಬೆಂಗಳೂರು: ಕೊರೊನಾ ಸೋಂಕಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶೀಘ್ರ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸಿ, ನಿನ್ನೆ ರಾತ್ರಿ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡಿಕೆಶಿ ಅಭಿಮಾನಿಗಳು ಈಡುಗಾಯಿ ಸೇವೆ ನೆರವೇರಿಸಿದ್ದರು.
ಇಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದವರು ಬೆಂಗಳೂರಿನ ವಯ್ಯಾಲಿಕಾವಲ್ ಟಿಟಿಡಿ ಶ್ರೀ ವೆಂಕಟೇಶ್ವರ ದೇಗುಲದಲ್ಲಿ 1001 ತೆಂಗಿನಕಾಯಿಗಳನ್ನು ಒಡೆದು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್.ಅಂಗಡಿ, ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಆಗಸ್ಟ್ 24ರಂದು ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿಕೆಶಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕೆಶಿ ಗುಣಮುಖರಾಗಿ ಹೊರ ಬರುವವರೆಗೂ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ಈಡುಗಾಯಿ ಸೇವೆ ಸಲ್ಲಿಸಲು ನಿರ್ಧರಿಸಿದ್ದಾರೆ.