ETV Bharat / state

ಸಚಿವ ಸಂಪುಟ ಸಭೆಯಲ್ಲೂ ಪ್ರತಿಧ್ವನಿಸಿದ ಡ್ರಗ್ಸ್  ಮಾಫಿಯಾ - ಡ್ರಗ್ಸ್ ಮಾಫಿಯಾ ಅಪ್ ಡೇಟ್ ನ್ಯೂಸ್

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಕೆಲ ನಟ, ನಟಿಯರು, ಕಲಾವಿದರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಚರ್ಚೆ ನಡೆದಿದ್ದು, ಕೆಲ ಮಾಹಿತಿಯನ್ನು ಗೃಹ ಸಚಿವರಿಂದ ಸಿಎಂ ಯಡಿಯೂರಪ್ಪ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ವಿಧಾನಸೌದ
ವಿಧಾನಸೌದ
author img

By

Published : Sep 3, 2020, 5:32 PM IST

ಬೆಂಗಳೂರು : ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯವನ್ನೇ ತಲ್ಲಣ ಗೊಳಿಸುತ್ತಿರುವ ಡ್ರಗ್ಸ್ ಮಾಫಿಯಾದ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದ ಕೆಲ ನಟ, ನಟಿಯರು, ಕಲಾವಿದರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಚರ್ಚೆ ನಡೆದಿದ್ದು, ಕೆಲ ಮಾಹಿತಿಯನ್ನು ಗೃಹ ಸಚಿವರಿಂದ ಸಿಎಂ ಯಡಿಯೂರಪ್ಪ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಸಿಎಂ ಜೊತೆ ಹಲವು ಸಚಿವರು ದನಿಗೂಡಿಸಿ ಈ ಪ್ರಕರಣದಿಂದಾಗಿ ಗೃಹ ಇಲಾಖೆ ಮಾತ್ರವಲ್ಲದೆ ಕರ್ನಾಟಕ ರಾಜ್ಯಕ್ಕೂ ಕೆಟ್ಟ ಹೆಸರು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.

ಪ್ರಕರಣ ಕುರಿತಂತೆ ಸಭೆಗೆ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಿಸಿಬಿ ತನಿಖೆ ನಡೆಸಲು ಸೂಚನೆ ನೀಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ ಮಹತ್ವದ ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಮೂಲಕ ಎಲ್ಲೆಲ್ಲಿ ಡ್ರಗ್ಸ್ ಪೂರೈಕೆಯಾಗುತ್ತದೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸ್ವಯಂ ಹೇಳಿಕೆ ಕೊಟ್ಟವರು ಮಹತ್ವದ ಸುಳಿವು ಕೊಟ್ಟಿದ್ದಾರೆ. ಕೇವಲ ಸಿಸಿಬಿ ಮಾತ್ರವಲ್ಲ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕ್ರೈಂ ಬ್ರಾಂಚ್ ಹೆಚ್ಚು ಜಾಗೃತವಾಗಿರುವಂತೆ ಸೂಚಿಸಿದ್ದೇವೆ. ಮೇಲ್ನೋಟಕ್ಕೆ ಇದರಲ್ಲಿ ಕನ್ನಡ ಚಿತ್ರರಂಗದ ಪ್ರಮುಖರು, ರಿಯಲ್ ಎಸ್ಟೇಟ್ ಮಾಫಿಯಾ ಸೇರಿದಂತೆ ಕೆಲವು ಸಮಾಜಘಾತುಕ ಶಕ್ತಿಗಳು ಭಾಗಿಯಾಗಿರುವುದು ಕಂಡುಬಂದಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವುದು ಕಂಡುಬಂದಿರುವುದರಿಂದ ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ತನಿಖೆಯ ನೇತೃತ್ವ ವಹಿಸಿದ್ದಾರೆ. ಯಾವುದೇ ಒತ್ತಡ, ರಾಜಕೀಯ ಪ್ರಭಾವಗಳಿಗೆ ಮಣಿಯದೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೊಮ್ಮಾಯಿ ಅವರು ಸಭೆಗೆ ಹೇಳಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.