ETV Bharat / state

ವೈಮಾನಿಕ ಸಮೀಕ್ಷೆಗೆ ಸಿಎಂ ಬೀದರ್ ಜಿಲ್ಲೆ ಕಡೆಗಣಿಸಿದ್ದು ಸರಿಯಲ್ಲ: ಖಂಡ್ರೆ - ವೈಮಾನಿಕ ಸಮೀಕ್ಷೆ

ಕಲ್ಯಾಣ ಕರ್ನಾಟಕದ ಭಾಗವಾದ ಬೀದರ್ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಶೇ. 80ರಷ್ಟು ಬೆಳೆಹಾನಿ ಉಂಟಾಗಿದೆ. ಹಾಗಾಗಿ ವೈಮಾನಿಕ ಸಮೀಕ್ಷೆಯಲ್ಲಿ ಬೀದರ್ ಜಿಲ್ಲೆಯನ್ನು ಕಡೆಗಣಿಸಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
author img

By

Published : Oct 19, 2020, 10:08 AM IST

ಬೆಂಗಳೂರು: ಕಣ್ಣು, ಕಿವಿ, ಹೃದಯವಿಲ್ಲದ ದಪ್ಪ ಚರ್ಮದ ಸಂವೇದನಾ ರಹಿತ ಸರ್ಕಾರವಿದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಭೀಕರ ಪ್ರವಾಹದಿಂದಾಗಿ ಕಲ್ಯಾಣ ಕರ್ಣಾಟಕದ ಎಲ್ಲಾ ಜಿಲ್ಲೆಗಳು ಕತ್ತರಿಸಿ ಹೋಗಿವೆ. ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವೈಮಾನಿಕ ಸಮೀಕ್ಷೆಯಲ್ಲಿ ಬೀದರ್ ಜಿಲ್ಲೆಯ ಹೆಸರೇ ಇಲ್ಲ, ಯಾಕೆ ಬೀದರ್ ಜಿಲ್ಲೆಯಲ್ಲಿ ನಷ್ಟ ಆಗಿಲ್ಲವೇ?, ಪ್ರವಾಹ ಬಂದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಬಿತ್ತನೆ ಆಗಿದ್ದ 3.7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಸುಮಾರು 2.47 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಯಾಗಿರುವುದು ಸರ್ಕಾರಕ್ಕೆ ಕಾಣುತ್ತಿಲ್ಲವೆ?, ಮುಖ್ಯಮಂತ್ರಿಗಳು ಯಾಕೆ ಬೀದರ್ ಬಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ?, ಯಡಿಯೂರಪ್ಪನವರು ಬೀದರ್ ಜಿಲ್ಲೆಯ ವೈಮಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಭಾಗವಾದ ಬೀದರ್ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಶೇ. 80ರಷ್ಟು ಬೆಳೆಹಾನಿ ಉಂಟಾಗಿದೆ. ಹಾಗಾಗಿ ವೈಮಾನಿಕ ಸಮೀಕ್ಷೆಯಲ್ಲಿ ಬೀದರ್ ಜಿಲ್ಲೆಯನ್ನು ಕಡೆಗಣಿಸಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯಮಂತ್ರಿಗಳು ಇದೇ 21ರಂದು ಕೈಗೊಳ್ಳಲಿರುವ ವೈಮಾನಿಕ ಸಮೀಕ್ಷೆಯಲ್ಲಿ ಬೀದರ್ ಜಿಲ್ಲೆಯನ್ನು ಕೂಡ ಸಮೀಕ್ಷೆ ಮಾಡಿ, ನ್ಯಾಯಯುತವಾಗಿ ನಮ್ಮ ಜಿಲ್ಲೆಗೆ ಸಿಗಬೇಕಿರುವ ಪರಿಹಾರದ ಮೊತ್ತ ಬಿಡುಗಡೆ ಮಾಡಬೇಕೆಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇನೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.