ದಾವಣಗೆರೆ: ಅಂಗನವಾಡಿ ಕೇಂದ್ರದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿರುವ ಘಟನೆ ಜಗಳೂರು ತಾಲೂಕು ಜಾಡನಕಟ್ಟೆಯಲ್ಲಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ಅಡುಗೆ ಮಾಡುವಾಗ ಸಿಲಿಂಡರ್ ಸೋರಿಕೆಯಾಗಿದ್ದು, ಆಕಸ್ಮಿಕವಾಗಿ ಬೆಂಕಿ ಹೊತ್ತಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ಡ್ರೈವರ್ ಸಮಯಪ್ರಜ್ಞೆಯಿಂದ ಬೆಂಕಿ ನಂದಿಸಿದ್ದಾರೆ. 20ಕ್ಕೂ ಹೆಚ್ಚು ಮಕ್ಕಳು ಹಾಗೂ ಸಿಬ್ಬಂದಿ ಅನಾಹುತದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಜಗಳೂರು ಅಗ್ನಿಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.