ಚಾಮರಾಜನಗರ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ನಡೆಸಿದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರೊಬ್ಬರಿಗೆ ಕೊರೊನಾ ಸೋಂಕು ಇರುವುದು ಇಂದು ಬೆಳಗ್ಗೆ ದೃಢಪಟ್ಟಿದೆ.
ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್ ಆಗಲು ನಿರ್ಧರಿಸಿದ್ದು, ಸಾರ್ವಜನಿಕರು ನೇರವಾಗಿ ಭೇಟಿ ಮಾಡಬಾರದೆಂದು ಮನವಿ ಮಾಡಿದ್ದಾರೆ.
ಇನ್ನು ಕೊರೊನಾ ಸೋಂಕಿತ ಮುಖಂಡರು ವಿಜಯೇಂದ್ರ ಜೊತೆಗೂ ಮಾತುಕತೆ ನಡೆಸಿದ್ದು, ಅವರೊಟ್ಟಿಗೆ ಪ್ರವಾಸ ಮಾಡಿರುವುದಾಗಿ ತಿಳಿದುಬಂದಿದೆ. ಆದರೆ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕ್ವಾರಂಟೈನ್ ಆಗುವ ಕುರಿತು ಮಾಹಿತಿ ಲಭ್ಯವಾಗಿಲ್ಲ.