ಚಿಕ್ಕಬಳ್ಳಾಪುರ/ಬೆಂಗಳೂರು: ಮತದಾನಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸರ್ವ ಸನ್ನದ್ಧವಾಗಿದೆ. ಜಿಲ್ಲಾಡಳಿತ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಈ ಲೋಕಸಭಾ ಕ್ಷೇತ್ರದಲ್ಲಿರುವ 2284 ಮತಗಟ್ಟೆಗಳ ಪೈಕಿ, 1803 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು, 481 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇನ್ನು ಮತಗಟ್ಟೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಗತ್ಯ ಸಿಬ್ಬಂದಿ ಹಾಗೂ ಭದ್ರತೆಯನ್ನು ಒದಗಿಸಲಾಗಿದೆ. ಕ್ಷೇತ್ರದಾದ್ಯಂತ ಒಟ್ಟು 18 ಲಕ್ಷ, 8 ಸಾವಿರದ 359 ಮತದಾರರಿದ್ದಾರೆ. 9 ಲಕ್ಷ 10 ಸಾವಿರದ 463 ಪುರುಷ ಮತದಾರರು, 8 ಲಕ್ಷ 97 ಸಾವಿರ 659 ಮಹಿಳಾ ಮತದಾರರಿದ್ದು, 237 ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ವಿಧಾನಸಭಾ ಕ್ಷೇತ್ರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ. 8 ವಿಧಾನಸಭಾ ಕ್ಷೇತ್ರಗಳ ಪೈಕಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್ಎ ಎಸ್.ಆರ್. ವಿಶ್ವನಾಥ್ ಹೊರತುಪಡಿಸಿದರೆ, ಇನ್ನುಳಿದ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಶದಲ್ಲಿವೆ.
ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಜೆಡಿಎಸ್ನ ಶ್ರೀನಿವಾಸ್ ಮೂರ್ತಿ, ದೇವನಹಳ್ಳಿಯಲ್ಲಿ ಜೆಡಿಎಸ್ನ ನಿಸರ್ಗ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ನ ವೆಂಕಟರಮಣಯ್ಯ, ಹೊಸಕೋಟೆಯಲ್ಲಿ ಕಾಂಗ್ರೆಸ್ನ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ನ ಸುಧಾಕರ್, ಗೌರಿಬಿದನೂರು ಕಾಂಗ್ರೆಸ್ನ ಶಿವಶಂಕರರೆಡ್ಡಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಸ್.ಎನ್. ಸುಬ್ಬಾರೆಡ್ಡಿ ಶಾಸಕರಾಗಿದ್ದಾರೆ.
ಮತಗಟ್ಟೆಗಳ ಸಂಖ್ಯೆ:
ಗೌರಿಬಿದನೂರು 261 ಪೋಲಿಂಗ್ ಬೂತ್, ಬಾಗೇಪಲ್ಲಿ- 264, ಚಿಕ್ಕಬಳ್ಳಾಪುರ -254, ಹೊಸಕೋಟೆ-286, ದೇವನಹಳ್ಳಿ- 292, ದೊಡ್ಡಬಳ್ಳಾಪುರ- 276, ನೆಲಮಂಗಲ- 276, ಯಲಹಂಕ -376 ಸೇರಿದಂತೆ ಕ್ಷೇತ್ರದಾದ್ಯಂತೆ ಒಟ್ಟು 2,284 ಪೋಲಿಂಗ್ ಬೂತ್ಗಳನ್ನ ಅಣಿಗೊಳಿಸಲಾಗಿದೆ.
ವಿಕಲಚೇತನ ಮತದಾರರಿಗೆ ವಿಶೇಷ ಸಾರಿಗೆ ಸೌಲಭ್ಯ:
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 7,521 ವಿಕಲಚೇತನ ಮತದಾರರಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 1,731, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,906, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 2,036 ಹಾಗೂ ನೆಲಮಂಗಲ ವಿಧಾನ ಸಭಾ ಕ್ಷೇತ್ರದಲ್ಲಿ 1,848 ವಿಕಲಚೇತನ ಮತದಾರರಿದ್ದಾರೆ. ವಿಕಲಚೇತನರಿಗೆ ಮತದಾನದ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದ್ದು, ಒಟ್ಟು 1,895 ಆಟೋ ಸೌಲಭ್ಯ ಕಲ್ಪಿಸಲಾಗಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 469, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 487, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 464 ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 475 ಆಟೋ ಸೌಲಭ್ಯ ಕಲ್ಪಿಸಲಾಗಿದೆ.
ಇನ್ನು ಮಸ್ಟರಿಂಗ್ ರೂಂನಿಂದ ಮತಗಟ್ಟೆಗಳತ್ತ ಸಿಬ್ಬಂದಿ ಹೊರಟಿದ್ದಾರೆ. ಪರಿಕರಗಳು ಹಾಗೂ ಚಿಕ್ಕಬಳ್ಳಾಪುರ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಜಿಲ್ಲೆಯ ಮತಗಟ್ಟೆಗಳತ್ತ ಸಾರಿಗೆ ಬಸ್ಗಳಲ್ಲಿ ಸಾಗಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಚಿಕ್ಕಬಳ್ಳಾಪುರದಲ್ಲಿ ಭದ್ರತೆ :
6 ಡಿ.ವೈ.ಎಸ್.ಪಿ, 18 ಸಿ.ಪಿ.ಐ, 27 ಪಿ.ಎಸ್.ಐ, 90 ಎ.ಎಸ್.ಐ ಸೇರಿ 1963 ಸಿಬ್ಬಂದಿ ನಿಯೋಜನೆಯನ್ನು ಕ್ಷೇತ್ರದಾದ್ಯಂತ ನಿಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8,17,600 ಮತದಾರರು:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8,17,600 ಮತದಾರರಿದ್ದು, ಅವರಲ್ಲಿ 4,11,624 ಪುರುಷ ಮತದಾರರು, 4,05,855 ಮಹಿಳಾ ವೋಟರ್ಸ್ ಹಾಗೂ ಇತರೆ ವರ್ಗಕ್ಕೆ ಸೇರಿದ 121 ಮತದಾರರಿದ್ದಾರೆ.
ಅಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 1,130 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 286, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 292, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276 ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳು ವೋಟಿಂಗ್ಗೆ ಸಜ್ಜಾಗಿವೆ.