ಚಿಕ್ಕೋಡಿ: ಬಸ್ ಹಿಂದಿನ ಗಾಲಿಗೆ ಸಿಕ್ಕಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.
ಶಾನೂರ್ ತುಕಾರಾಮ ಪೂಜಾರಿ (10) ಮೃತ ಬಾಲಕ. ಗ್ರಾಮಸ್ಥರು ಘಟನೆ ಖಂಡಿಸಿ, ರಸ್ತೆ ತಡೆದು ಹಂಪ್ ಹಾಕುವಂತೆ ಒತ್ತಾಯಿಸಿದ್ದಾರೆ. ಇನ್ನು ಈ ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಹನಗಳು ಇಲ್ಲಿ ಜೋರಾಗಿ ಚಲಿಸುತ್ತವೆ. ಅಪಘಾತಗಳು ಸಂಭವಿಸುತ್ತಿವೆ ಎಂದು ಹಲವು ಬಾರಿ ಅಧಿಕಾರಿಗಳಿಗೆ ಗ್ರಾಮಸ್ಥರು ಹೇಳಿದರೂ ಪ್ರಯೋಜನವಾಗಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಬಸ್ ಹಾಗೂ ರಾಜ್ಯ ಹೆದ್ದಾರಿ ತಡೆದು, ಟೈಯರ್ಗೆ ಬೆಂಕಿ ಹಚ್ಚಿಆಕ್ರೋಶ ವ್ಯಕ್ತಪಡಿಸಿದ್ರು. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.