ರಾಮನಗರ: ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಅಪರಿಚಿತ ಮಹಿಳೆವೋರ್ವಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಕೆಂಪಯ್ಯನಪಾಳ್ಯ ಗ್ರಾಮದ ಬಳಿಯ ನೀಲಗಿರಿ ತೋಪಿನಲ್ಲಿ ನಡೆದಿದೆ.
ರಾಮನಗರ ತಾಲೂಕಿನ ಬಿಡದಿ ಬಳಿಯ ಕೆಂಪಯ್ಯನಪಾಳ್ಯ ಗ್ರಾಮದ ನೀಲಗಿರಿ ತೋಪಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹದ ಬಳಿ ಮದ್ಯದ ಪ್ಯಾಕೆಟ್ ಹಾಗೂ ಬಾಟಲ್ ಪತ್ತೆಯಾಗಿದ್ದು, ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ಆರಂಭಿಸಿದ್ದಾರೆ.