ETV Bharat / state

ಕೊರೊನಾ ತಡೆಗೆ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡಬೇಕು: ದೇವೇಗೌಡ - ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಹೆಚ್ ಡಿ ಡಿ ಮನವಿ

ರಾಜ್ಯದಲ್ಲಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜು. 14ರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಜಾರಿ ಮಾಡಿದೆ. ಇದರ ಜೊತೆಗೆ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಆಗ್ರಹಿಸಿದ್ದಾರೆ.

Deve gowdha
Deve gowdha
author img

By

Published : Jul 13, 2020, 11:10 AM IST

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಇದರ ಜೊತೆಗೆ ಇಡೀ ರಾಜ್ಯದಲ್ಲಿ ಲಾಕ್​​ಡೌನ್ ಜಾರಿ ಮಾಡುವಂತೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜು. 14ರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಜಾರಿ ಮಾಡಿದೆ. ಇದರ ಜೊತೆಗೆ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಆರೋಗ್ಯವೇ ಭಾಗ್ಯ, ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರು ಸ್ಯಾನಿಟೈಸರ್​​ನಿಂದ ಕೈ ಸ್ವಚ್ಛಗೊಳಿಸಿ ನಂತರ ಮುಟ್ಟಿ. ಮುಖ್ಯವಾದ ಕೆಲಸ ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಮಹಾಮಾರಿ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜ್​​ಗಳನ್ನು ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರು ಆಪಾದಿಸುತ್ತಿದ್ದಾರೆ. ಅದೇನೇ ಇದ್ದರು ಮುಂಬರುವ ಅಧಿವೇಶನದಲ್ಲಿ ಚರ್ಚೆ ಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲಾ ಅದರ ಕಡೆ ಗಮನ ಹರಿಸೋಣ. ಸರ್ಕಾರವು ಸಹ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು, ನಾವೆಲ್ಲಾ ಜೊತೆಗಿದ್ದೇವೆ. ಜನರ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ದಯವಿಟ್ಟು ಇನ್ಮುಂದಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ ಎಂದು ಗೌಡರು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.