ETV Bharat / state

ಬಂಗಾಳದ ರಾಜಕೀಯ ಪ್ರೇರಿತ ಹಿಂಸಾಚಾರ, ಪ್ರಜಾಪ್ರಭುತ್ವದ ಕಗ್ಗೊಲೆ: ನಳಿನ್‍ಕುಮಾರ್ ಕಟೀಲ್ - West Bengal bjp tmc activists fight

ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರವೂ ರಾಜಕೀಯ ಅಸಹನೆ ಮತ್ತು ದ್ವೇಷದ ರಾಜಕೀಯವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅರಾಜಕತೆಗೆ ನಾಂದಿಯಾಗಿದೆ.

mamta banerjee government killing democracy

author img

By

Published : May 4, 2021, 7:14 PM IST

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಾರ್ಯಕರ್ತರು ದ್ವೇಷದ ಮತ್ತು ದೌರ್ಜನ್ಯದ ರಾಜಕೀಯ ಮಾಡುತ್ತಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರ ರಾಜಕೀಯ ದ್ವೇಷದ ಫಲಶ್ರುತಿಯಾಗಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮತ್ತು ಹತ್ಯೆ, ಮಹಿಳಾ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಪ್ರಯತ್ನ ಹಾಗೂ ಬಿಜೆಪಿ ಕಾರ್ಯಾಲಯಗಳಿಗೆ ಬೆಂಕಿ ಇಡುವುದು, ಹಿಂದೂಗಳಿಗೆ ಸೇರಿದ ಮಳಿಗೆಗಳ ಲೂಟಿ ಮಾಡುವುದು ಎಗ್ಗಿಲ್ಲದೆ ಸಾಗಿದೆ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರವೂ ರಾಜಕೀಯ ಅಸಹನೆ ಮತ್ತು ದ್ವೇಷದ ರಾಜಕೀಯವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅರಾಜಕತೆಗೆ ನಾಂದಿಯಾಗಿದೆ ಎಂದು ಟೀಕಿಸಿದ್ದಾರೆ.

ಸ್ವಂತ ಕ್ಷೇತ್ರದಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಸಂಭ್ರಮಾಚರಣೆಯ ನೆಪದಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಮತ್ತು ಹಿಂದೂಗಳನ್ನು ಗುರಿಯಾಗಿಸಿ ವ್ಯವಸ್ಥಿತವಾಗಿ ನಡೆಸುತ್ತಿರುವ ಹಲ್ಲೆ, ದೌರ್ಜನ್ಯ ಮತ್ತು ಅತ್ಯಾಚಾರಗಳನ್ನು ಹತ್ತಿಕ್ಕದೇ ದ್ವೇಷದ ರಾಜಕೀಯಕ್ಕೆ ಕುಮ್ಮಕ್ಕು ನೀಡುತ್ತಿರುವುದು ಸರ್ವಥಾ ಖಂಡನೀಯ.

ಒಂದು ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ಚುನಾವಣೆಯನ್ನು ಗೆದ್ದ ಮೇಲೆ ರಾಜ್ಯದ ಎಲ್ಲ ಜನತೆಯನ್ನು ಮಕ್ಕಳಂತೆ ನೋಡುವ ಜವಾಬ್ದಾರಿ ಸಂವಿಧಾನದ ಆಶಯವಾಗಿದ್ದು, ಟಿಎಂಸಿ ಕಾರ್ಯಕರ್ತರ ಈ ದ್ವೇಷದ ವರ್ತನೆ ನಾಗರಿಕ ಸಮಾಜದ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದ್ದು, ಎಲ್ಲೋ ಒಂದೆಡೆ ಅಹಂಕಾರದ ಸರ್ವಾಧಿಕಾರಿ ಧೋರಣೆಯನ್ನು ಪ್ರತಿನಿಧಿಸುವಂತಿದ್ದು, ಸಂವಿಧಾನದ ಆಶಯಗಳಿಗೆ ತಿಲಾಂಜಲಿ ನೀಡಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಧಿಕಾರ ಸಿಕ್ಕಿದ ಭ್ರಮೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ದೌರ್ಜನ್ಯ ಮತ್ತು ದ್ವೇಷದ ರಾಜಕೀಯ ಮಾಡುತ್ತಿರುವುದನ್ನು ಈ ದೇಶ ಯಾವತ್ತೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಈ ಹಿಂಸಾಚಾರಗಳನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ನಳಿನ್‍ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.