ETV Bharat / state

ಕೊರೊನಾ ಸೋಂಕು ಸಮರ್ಥವಾಗಿ ನಿಭಾಯಿಸಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಸಿದ್ಧತೆ - Shivamogga district news

ಕೊರೊನಾ ಭೀತಿಯನ್ನು ಸಂಪೂರ್ಣವಾಗಿ ನಿಭಾಯಿಸಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ತಿಳಿಸಿದ್ದಾರೆ.

McGann Hospital
McGann Hospital
author img

By

Published : Jun 25, 2020, 3:40 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 119 ಸೋಂಕಿತರು ಪತ್ತೆಯಾಗಿದ್ದು, 89 ಮಂದಿ ಗುಣಮುಖರಾಗಿದ್ದಾರೆ. ಸದ್ಯ 28 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಸೋಂಕಿತ ರೋಗಿಗಳಿಗಾಗಿ ಪ್ರಸ್ತುತ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. 20 ಐಸಿಯು ಹಾಸಿಗೆಗಳು, 40 ಹೆಚ್‍ಡಿಯು ಹಾಸಿಗೆಗಳು ಮತ್ತು 40 ಐಸೊಲೇಷನ್ ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 8 ವೆಂಟಿಲೇಟರ್ ಲಭ್ಯವಿದೆ. ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ಪ್ರತ್ಯೇಕವಾಗಿ ಒಳಬರಲು ಹಾಗೂ ಹೊರ ಹೋಗಲು ಅನುಕೂಲವಾಗುವಂತೆ ಪ್ರತ್ಯೇಕ ರ್ಯಾಂಪ್ ಸಿದ್ಧಪಡಿಸಲಾಗಿದೆ ಎಂದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ, ಸೋಂಕಿತರಿಗೆ ಆಹಾರ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ವಾರ್ಡ್‍ಗಳಲ್ಲಿರುವ ಎಲ್ಲಾ ಬಾತ್‍ರೂಂಗಳಿಗೆ ಗೀಜರ್ ಅಳವಡಿಸಲಾಗಿದೆ. ಕುಡಿಯಲು ಬಿಸಿ ಹಾಗೂ ತಣ್ಣನೆಯ ನೀರು ಬರುವಂತಹ 3 ಡಿಸ್ಪೆನ್ಸರ್‍ಗಳನ್ನು ಇರಿಸಲಾಗಿದೆ. ಉತ್ತಮ ಆಹಾರವನ್ನು ಪ್ರತಿದಿನ ಒದಗಿಸಲಾಗುತ್ತಿದೆ. ಪ್ರತಿ ದಿನ 2,500 ಕ್ಯಾಲರಿಗಳಷ್ಟು ಚಪಾತಿ, ಕಾಳು ಪಲ್ಯ, ಮೊಟ್ಟೆ, ಅನ್ನ, ಸಾಂಬಾರು ಮತ್ತು ಹಣ್ಣುಗಳನ್ನು ಒಳಗೊಂಡಂತೆ ಶುದ್ಧ ಆಹಾರವನ್ನು ಒದಗಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಸಾಮರ್ಥ್ಯ ಹೆಚ್ಚಳ:

ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧತೆಗಳನ್ನು ಮಾಡಲಾಗಿದೆ. ಕೋವಿಡ್ ಆಸ್ಪತ್ರೆಯನ್ನು ಪ್ರಸ್ತುತವಿರುವ 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆಗಳಿಗೆ ವಿಸ್ತರಿಸಲಾಗಿದೆ. ಆಸ್ಪತ್ರೆಯ ನೆಲ ಮಹಡಿಯಲ್ಲಿ ಹೆಚ್ಚುವರಿಯಾಗಿ 150 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.
ಇದರಲ್ಲಿ ತಲಾ 30 ಐಸಿಯು ಬೆಡ್ ಮತ್ತು ಹೆಚ್‍ಡಿಯು ಬೆಡ್ ಮತ್ತು 90 ಐಸೊಲೇಷನ್ ಬೆಡ್‍ಗಳಿವೆ. ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳಿಗೆ ಅವಶ್ಯವಿರುವ ಸ್ಯಾನಿಟೈಸರ್, ಪಿಪಿಇ ಕಿಟ್, ಎನ್-95 ಮಾಸ್ಕ್‌ಗಳನ್ನು ಪೂರೈಸಲಾಗಿದೆ.

ವ್ಯವಸ್ಥೆ ಸುಧಾರಣೆಗೆ ಕ್ರಮ:

ಸೋಂಕಿತರಿಗೆ ಇನ್ನಷ್ಟು ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಫಾರ್ಮ್ ನೀಡಲಾಗುತ್ತಿದೆ. ಅದರಲ್ಲಿ ಅವರು ನೀಡುವ ಸಲಹೆಗಳನ್ನು ಪರಿಗಣಿಸಿ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗಳಿಗಾಗಿ ಪ್ರತ್ಯೇಕವಾಗಿ ಡಯಾಲಿಸಿಸ್, ಆಪರೇಷನ್ ಥಿಯೇಟರ್, ಪೋಸ್ಟ್ ಆಪರೇಟಿವ್ ವಾರ್ಡ್‍ಗಳನ್ನು ತೆರೆಯಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿರುವುದರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದಿನಂತೆ ಎಲ್ಲಾ ರೀತಿಯ ಚಿಕಿತ್ಸೆಗಳು ಲಭ್ಯವಿದೆ ಎಂದು ಡಾ.ಸಿದ್ದಪ್ಪ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.