ಬೆಳಗಾವಿ: ಜಿಲ್ಲೆಯಲ್ಲಿ ಅಂತರ್ ಜಿಲ್ಲಾ ಪ್ರವಾಸ ಮಾಡಿದವರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇಂದು 9 ಜನರಿಗೆ ಕೊರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ.
ಜಿಲ್ಲೆಗೆ ಬೆಂಗಳೂರಿಂದ ಮರಳಿದ್ದ ಯುವಕ ಸೇರಿ 9 ಜನರಿಗೆ ಕೊರೊನಾ ಶಂಕೆ ಇದ್ದು, ಈಗಾಗಲೇ ನಗರದ ಸದಾಶಿವ ನಗರದ ಯುವಕ, ತಾಲೂಕಿನ ಕಾಕತಿ ಗ್ರಾಮದ ವ್ಯಕ್ತಿ, ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮದ ದಂಪತಿ, ಹುಕ್ಕೇರಿ ತಾಲೂಕಿನ ಐವರಲ್ಲಿ ಕೊರೊನಾ ಸೋಂಕು ದೃಢವಾಗಿರುವ ಕುರಿತು ಶಂಕೆ ವ್ಯಕ್ತವಾಗಿದೆ.
ಇನ್ನು ಬೆಳಗಾವಿಯ ಸದಾಶಿವನಗರದ ಯುವಕನಿಗೆ ಕೊರೊನಾ ಪಾಸಿಟಿವ್ ಶಂಕೆ ವ್ಯಕ್ತವಾದ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಯುವಕನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಇದಲ್ಲದೇ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತಿದೆ. ಅಲ್ಲದೆ ಸದಾಶಿವ ನಗರದಲ್ಲಿ ಪಾಲಿಕೆ ಸಿಬ್ಬಂದಿಗಳಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 9 ಜನರಿಗೆ ಕೊರೊನಾ ಪಾಸಿಟಿವ್ ಶಂಕೆ
ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿಂದು 9 ಜನರಿಗೆ ಕೋವಿಡ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.