ETV Bharat / state

ಜೂನ್‌ 1ರಿಂದ ಜುಲೈ 30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೀನುಗಾರಿಕೆ ಬಂದ್..

ಈ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಜೂನ್‌ 1ರಿಂದ ಜುಲೈ 30ರವರೆಗೆ ಮೀನುಗಾರಿಕೆಗೆ ಆಸ್ಪದವಿಲ್ಲ.

No fishing in shivamogga until Monsoon season finish

author img

By

Published : Jun 2, 2020, 7:36 PM IST

Updated : Jun 2, 2020, 8:35 PM IST

ಶಿವಮೊಗ್ಗ: ಮುಂಗಾರು ಮಳೆಗಾಲದಲ್ಲಿ ಮೀನು ಹಿಡಿಯುವುದಕ್ಕೆ ನಿಷೇಧವಿದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಜೂನ್‌ 1ರಿಂದ ಜುಲೈ 30ರವರೆಗೆ ಜಿಲ್ಲೆಯ ಎಲ್ಲಾ ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ನಿಯಮ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Last Updated : Jun 2, 2020, 8:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.