ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಸುತ್ತೂರು ಶಾಖಾ ಮಠಕ್ಕೆ ಪ್ರತಿ ವರ್ಷ ಗಣ್ಯರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಭೇಟಿ ನೀಡಿ ಪೂಜ್ಯರ ದರ್ಶನ, ಆಶೀರ್ವಾದ ಪಡೆಯುತ್ತಿದ್ದರು. ಆದರೆ ಈ ವರ್ಷ ಕೋವಿಡ್ ವೈರಸ್ ಹರಡುವಿಕೆ ಮುಂದುವರೆದ ಹಿನ್ನೆಲೆ ಅದಕ್ಕೆಲ್ಲಾ ಬ್ರೇಕ್ ಹಾಕಲಾಗಿದೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ. ಆದರೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.