ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯು ಮುಂಬರುವ ಹಬ್ಬಕ್ಕಾಗಿ ವಿಶೇಷ ರೈಲುಗಳ ಸಂಚಾರ ಶುರು ಮಾಡುತ್ತಿದೆ. ಈ ವೇಳೆ ಅನಗತ್ಯವಾಗಿ ರೈಲು ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸುವ ಉದ್ದೇಶದಿಂದ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ ಮಾಡಲಾಗಿದೆ.
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಜನ ಸೇರದಂತೆ ಈ ನಿರ್ಧಾರ ಕೈಗೊಂಡಿದ್ದು, ಪ್ರಮುಖ ರೈಲ್ವೆ ನಿಲ್ದಾಣಗಳಾದ ಕೃಷ್ಣರಾಜಪುರಂ, ಬಂಗಾರ ಪೇಟೆ, ತುಮಕೂರು, ಹೊಸೂರು, ಧರ್ಮಪುರಿ, ಕೆಂಗೇರಿ, ಮಂಡ್ಯ , ಹಿಂದೂಪುರ, ಪೆನುಕೊಂಡ, ಯಲಹಂಕ, ಬಾಣಸವಾಡಿ, ಕಾರ್ಮೆಲಾರಂ ಮತ್ತು ವೈಟ್ ಫೀಲ್ಡ್ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಟಿಕೆಟ್ 10 ರೂಪಾಯಿ ಇದ್ದಿದ್ದನ್ನು 50 ರೂ.ಗೆ ಏರಿಕೆ ಮಾಡಲಾಗಿದೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದ್ದು, ನವೆಂಬರ್ 10ರವರೆಗೆ ದರ ಹೆಚ್ಚಳ ಇರಲಿದೆ.