ಬೆಂಗಳೂರು : ನಾಳೆಯ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಈ ಸಂಬಂಧ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಅವರು, ಮೋದಿ ಮತ್ತು ಬಿ ಎಸ್ ಯಡಿಯೂರಪ್ಪ ಸರ್ಕಾರಗಳು ನಮ್ಮ ರೈತರ ಜೀವನ ಹಾಗೂ ಜೀವನಾಧಾರ ಕಿತ್ತುಕೊಳ್ಳಲು ಹವಣಿಸುತ್ತಿವೆ. ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆಗಳ ಕುಟಿಲ ತಿದ್ದುಪಡಿಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುವ ಪಿತೂರಿಯ ಪುರಾವೆಗಳಾಗಿವೆ ಎಂದಿದ್ದಾರೆ.
ನಾಳೆ ರೈತ ಸಂಘಟನೆಗಳು ನೀಡಿರುವ ಬಂದ್‌ಗೆ ಕರ್ನಾಟಕ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತಿದೆ. ಬಂದ್ ಯಶಸ್ವಿಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರೆಲ್ಲರೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.