ಬೆಳಗಾವಿ : ನಗರದ ಬಾಗಲಕೋಟೆ ಹೆದ್ದಾರಿಯ ಸಾಂಬ್ರಾ ಬಳಿ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅರ್ಧ ಹೆಲ್ಮೆಟ್ ಧರಿಸಿದ್ದ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಸಾಂಬ್ರಾ ಗ್ರಾಮದ ಯುವಕ ಸುನೀಲ್ ಯಡ್ಡೆ ದ್ವಿಚಕ್ರ ವಾಹದಲ್ಲಿ ಬೆಳಗಾವಿಯಿಂದ ಸಾಂಬ್ರಾ ಕಡೆಗೆ ಹೋಗುತ್ತಿದ್ದ. ಈ ವೇಳೆ ಬೆಳಗಾವಿ ಮತ್ತು ಬಾಗಲಕೋಟೆ ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಅಟೋಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿದೆ. ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ್ದರೆ ಯಾವುದೇ ಅಪಾಯವಾಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ.