ETV Bharat / state

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲಾದ ಹಿಂದೆ ಸರ್ಕಾರದ ಕೈವಾಡ: ಸಿದ್ದರಾಮಯ್ಯ - ರಾಜರಾಜೇಶ್ವರಿ ನಗರ ಉಪಚುನಾವಣೆ

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಹೋಗುತ್ತಿದ್ದಾಗ ಬಲವಂತದಿಂದ ನಮ್ಮನ್ನು ಪೊಲೀಸರು ತಡೆಯುವ ಪ್ರಯತ್ನ ಮಾಡಿದ್ದರು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Oct 16, 2020, 10:18 AM IST

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭ ಕುರಿತು ದೂರು ದಾಖಲಾಗಿರುವ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಹೋಗುತ್ತಿದ್ದಾಗ ನಮ್ಮನ್ನು ಬಲವಂತವಾಗಿ ತಡೆಯುವ ಪ್ರಯತ್ನ ಮಾಡಿದ್ದ ಪೊಲೀಸರು, ಅಭ್ಯರ್ಥಿ ಕುಸುಮ ಮತ್ತು ನನ್ನ ಬೆಂಗಾವಲು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದು ರಾಜ್ಯ ಬಿಜೆಪಿ ಸರ್ಕಾರದ ಸರ್ವಾಧಿಕಾರ, ದುರಹಂಕಾರ ಮತ್ತು ಹತಾಶೆಯ ನಡವಳಿಕೆ ಎಂದಿದ್ದಾರೆ.

ಚುನಾವಣೆಗಳು ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ನಡೆಯಬೇಕು ಮತ್ತು ಪೊಲೀಸರು ನಿಷ್ಪಕ್ಷಪಾತದಿಂದ ಕಾರ್ಯ ನಿರ್ವಹಿಸಬೇಕು. ಈ ಪ್ರಕರಣದಲ್ಲಿ ಚುನಾವಣಾ ಆಯೋಗವನ್ನು ಪಕ್ಕಕ್ಕೆ ಸರಿಸಿ ಪೊಲೀಸರೇ ಅತ್ಯುತ್ಸಾಹದಿಂದ ದೂರು ದಾಖಲಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ಚುನಾವಣಾ ನೀತಿಸಂಹಿತೆ ಮತ್ತು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದರೂ ಕಣ್ಣುಮುಚ್ಚಿಕೊಂಡಿದ್ದ ಪೊಲೀಸರ ನಡವಳಿಕೆ ಖಂಡನೀಯ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷ ದೂರು ನೀಡಲಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ, ಮುಂದಿನ ದಿನಗಳಲ್ಲಿ ಈ ರೀತಿ ಅಧಿಕಾರ ದುರುಪಯೋಗದ ಮೂಲಕ ನಮ್ಮನ್ನು ನಿಯಂತ್ರಿಸುವ ಪ್ರಯತ್ನ ಮಾಡಲಿರುವುದು ಸ್ಪಷ್ಟ. ಇದಕ್ಕೆ ಉಪಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳ ಮತದಾರರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.