ETV Bharat / state

ವಿಜಯಪುರ ಎಸ್.ಎಸ್.ಎಲ್ ಸಿ ವಿದ್ಯಾರ್ಥಿನಿಗೆ ಕೊರೊನಾ: ಪೂರಕ  ಪರೀಕ್ಷೆಗೆ ಅವಕಾಶ

ಹತ್ತನೇ ತರಗತಿಯ ವಿದ್ಯಾರ್ಥಿನಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ವಿಜಯಪುರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Sslc students tested corona positive in vijayapura

author img

By

Published : Jun 23, 2020, 9:41 PM IST

ವಿಜಯಪುರ: ನಗರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಪಟ್ಟಣದ ಖ್ವಾಜಾ ನಗರದ ಶಾಲೆಯಲ್ಲಿ ಓದುತ್ತಿದ್ದ 16 ವರ್ಷದ(ರೋಗಿ-9708) ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಇಂದು ಕೋವಿಡ್-19 ಸೋಂಕು ತಗುಲಿರುವುದು ಖಚಿತವಾಗಿದೆ.

ವಿದ್ಯಾರ್ಥಿನಿಗೆ ರೋಗಿ-8792ರ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ‌. ಸದ್ಯ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅವಕಾಶ ನೀಡದೆ, ಮುಂದಿನ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.