ETV Bharat / state

ವಿಚಾರಣೆ ರದ್ದು ಕೋರಿದ ಅರ್ಜಿ ವಜಾ; ಹೆಚ್​ಡಿಕೆಗೆ ಡಿನೋಟಿಫಿಕೇಷನ್ ಸಂಕಷ್ಟ

author img

By

Published : Oct 14, 2020, 5:36 PM IST

ಡಿನೋಟಿಫಿಕೇಷನ್ ಪ್ರಕರಣ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

High Court
High Court

ಬೆಂಗಳೂರು : ನಗರದ ಬನಶಂಕರಿಯ ಹಲಗೆವಡೇರಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಹಾಗೂ ಇಡೀ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಮನವಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿದ್ದು, ದಾಖಲೆಗಳಿಂದ ಮೇಲುನೋಟಕ್ಕೆ ಆರೋಪ ಸಾಬೀತಾಗಿರುವ ಕಾರಣದಿಂದ ನ್ಯಾಯಾಲಯ ಅರ್ಜಿದಾರರಿಗೆ ಸಮನ್ಸ್ ಜಾರಿ ಮಾಡಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ಗೆ ಯಾವುದೇ ಸೂಕ್ತ ಕಾರಣ ಕಂಡುಬರುತ್ತಿಲ್ಲ. ಇನ್ನು ವಿಚಾರಣೆಗೆ ಪೂರ್ವಾನುಮತಿ ಕಡ್ಡಾಯವಲ್ಲ ಎಂದು ಈ ಹಿಂದೆಯೇ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸಹ ನಿರಾಕರಿಸಿದೆ. ಆದ್ದರಿಂದ ವಿಚಾರಣೆಗೆ ಪೂರ್ವಾನುಮತಿ ಅಗತ್ಯವೆಂಬ ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಕಾನೂನು ದುರ್ಬಳಕೆ ಮಾಡಿಕೊಂಡು ದೂರು ದಾಖಲಿಸಿದ್ದಾರೆ ಎಂಬುದನ್ನು ಸಾಬೀತು ಪಡಿಸಲು ಯಾವುದೇ ದಾಖಲೆಗಳು ಇಲ್ಲ. ಹೀಗಾಗಿ, ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಕರಣದ ಹಿನ್ನೆಲೆ : ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ 2007ರ ಅವಧಿಯಲ್ಲಿ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ 3 ಎಕರೆ 34 ಗುಂಟೆ ಜಮೀನನ್ನು ನಿಯಮ ಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಎಂ.ಎಸ್. ಮಹದೇವಸ್ವಾಮಿ, ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನ ಮೇರೆಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಆಕ್ಷೇಪಿಸಿ ದೂರುದಾರ ಮಹಾದೇವಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, 2019ರ ಜುಲೈ 20 ರಂದು ಬಿ ರಿಪೋರ್ಟ್ ರದ್ದುಪಡಿಸಿತ್ತು. ಅಲ್ಲದೇ, ಅಕ್ಟೋಬರ್ 4ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಸೇರಿ 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೆಚ್ ಡಿ ಕೆ ಸಮನ್ಸ್ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.