ETV Bharat / state

ಪ್ರವಾಹ ಪರಿಸ್ಥಿತಿ ಎದುರಿಸಲು ಹಣದ ಕೊರತೆ ಇಲ್ಲ: ಬಿಎಸ್‌ವೈ - ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳು

ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.

ಯಡಿಯೂರಪ್ಪ
ಯಡಿಯೂರಪ್ಪ
author img

By

Published : Oct 16, 2020, 2:50 PM IST

ಬೆಂಗಳೂರು: ಪ್ರವಾಹ ಪರಿಸ್ಥಿತಿ ಎದುರಿಸಲು ಹಣಕಾಸಿನ ಕೊರತೆ ಇಲ್ಲ, ಅಗತ್ಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರವೂ ಭರವಸೆ ಕೊಟ್ಟಿದ್ದು, ರೈತರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.

ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಕ್ಕೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆ ಭೀಮಾ ಮತ್ತು ಇದರ ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ. ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಿ ಎಂದು ಸೂಚಿಸಿದ ಸಿಎಂ, ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು, ಕೋವಿಡ್ ಪರಿಸ್ಥಿತಿಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ ಎಂದರು.

ಈ ಬಾರಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದ್ದು, ನನಗೆ ವಾಸ್ತವ ಸ್ಥಿತಿಯ ಚಿತ್ರಣ ನೀಡಿ ಎಂದು ಡಿ.ಸಿ ಗಳಿಗೆ ಸೂಚಿಸಿದರು. ಜೊತೆಗೆ ಕೋವಿಡ್ 19 ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಗಳ ಪೂರೈಕೆ ಸೇರಿದಂತೆ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಲು ಸೂಚಿಸಿದರು.

ನೆರೆ ಸಂತ್ರಸ್ತರ ರಕ್ಷಣೆಗಾಗಿ ಪುಣೆ ಮತ್ತು ಚೆನ್ನೈ ರಾಜ್ಯಗಳಿಂದ ಎನ್‍ಡಿಆರ್‍ಎಫ್ ನ ಆರು ಹೆಚ್ಚುವರಿ ತಂಡಗಳು ಸೇರಿದಂತೆ ಒಟ್ಟು 12 ಎನ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಕಲಬುರಗಿಗೆ ಮೂರು ತಂಡಗಳು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಎಸ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟರ್ ಗಳನ್ನು ಕಳುಹಿಸಲಾಗಿದೆ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನೀತಿ ಸಂಹಿತೆ ಇರುವ ಕಾರಣ ವಿವರವಾಗಿ ಏನೂ ಹೇಳಲು ಸಾಧ್ಯವಿಲ್ಲ, 15 ಜನ ಡಿಸಿಗಳ ಜೊತೆ ಮಳೆ ಪರಿಸ್ಥಿತಿ ಚರ್ಚೆ ಮಾಡಿದ್ದೇನೆ, ಹಲವು ಸೂಚನೆ ಕೊಟ್ಟಿದ್ದೇನೆ. ಪರಿಹಾರ ಕ್ರಮ, ನೆರವಿನ ಬಗ್ಗೆ ಚರ್ಚೆ ಮಾಡಿದ್ದೇನೆ ರೈತರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ. ಕ್ರಮ ತೆಗೆದುಕೊಂಡು ಎಲ್ಲವನ್ನು ಸರಿಪಡಿಸುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.