ಚಿತ್ರದುರ್ಗ : ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದೂ ಸಹ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಚಿತ್ರದುರ್ಗ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಜೆಸಿಆರ್ ಬಡಾವಣೆಯ 40 ವರ್ಷದ ಮಹಿಳೆ ಸೇರಿದಂತೆ ನಗರದ ಹೊಳಲ್ಕೆರೆ ರಸ್ತೆಯ 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ಈ ಇಬ್ಬರು ಸೋಂಕಿತರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಚಿತ್ರದುರ್ಗದ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.