ಮಂಗಳೂರು: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರಿಸಿದೆ. ಇಂದು ಸಹ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಇಬ್ಬರು ಬಲಿಯಾಗಿದ್ದಾರೆ.
ಮಂಗಳೂರು ಹೊರವಲಯದ ಸಂತೋಷ್ ನಗರದ ನಿವಾಸಿ ಮೃತಪಟ್ಟವರು. 52 ವರ್ಷ ವಯಸ್ಸಿನ ಇವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಹೃದಯ ರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಕುತ್ತಾರಿನ 55 ವರ್ಷದ ವ್ಯಕ್ತಿ ಸಹ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.