ತುಮಕೂರು : ಜಿಲ್ಲೆಯಲ್ಲಿ ಇಂದು 105 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ ತುಮಕೂರು ತಾಲೂಕಿನಲ್ಲಿಯೇ 50 ಪಾಸಿಟಿವ್ ಪತ್ತೆಯಾಗಿವೆ.
ಕುಣಿಗಲ್ ತಾಲೂಕಿನಲ್ಲಿ 11, ಗುಬ್ಬಿ ಹಾಗೂ ಕೊರಟಗೆರೆ ತಾಲೂಕಿನಲ್ಲಿ ತಲಾ 9, ಮಧುಗಿರಿ ತಾಲೂಕಿನಲ್ಲಿ 7, ಪಾವಗಡ ತಾಲೂಕು ಹಾಗೂ ತಿಪಟೂರು ತಾಲೂಕಿನಲ್ಲಿ ತಲಾ 5 ಮಂದಿ, ತುರುವೇಕೆರೆ ತಾಲೂಕಿನಲ್ಲಿ 6 ಮಂದಿ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಇಬ್ಬರು ಹಾಗೂ ಶಿರಾ ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಸೋಂಕು ತಗುಲಿದೆ.
ಈ ಮೂಲಕ ತುಮಕೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,214ಕ್ಕೆ ಏರಿಕೆಯಾಗಿದೆ. ಅದರಲ್ಲಿ 560 ಮಂದಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 28 ಸೇರಿ 612 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ 42 ಮಂದಿ ಮೃತಪಟ್ಟಿದ್ದಾರೆ.