ETV Bharat / state

ತುಮಕೂರು: ದ್ವಿತೀಯ ಪಿಯುಸಿ ಇಂಗ್ಲಿಷ್​​ ಪರೀಕ್ಷೆಗೆ 1457 ವಿದ್ಯಾರ್ಥಿಗಳು ಗೈರು - ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ

ಜಿಲ್ಲೆಯಲ್ಲಿ ಒಟ್ಟು 24,970 ವಿದ್ಯಾರ್ಥಿಗಳ ಪೈಕಿ 23,513 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

PUC English exam
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ
author img

By

Published : Jun 18, 2020, 5:35 PM IST

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್​ ಪರೀಕ್ಷೆಗೆ 1457 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಒಟ್ಟು 24,970 ವಿದ್ಯಾರ್ಥಿಗಳ ಪೈಕಿ 23,513 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಹೊರ ಜಿಲ್ಲೆಯಿಂದ ಪರೀಕ್ಷೆ ಬರೆಯುವುದಾಗಿ ಈಗಾಗಲೇ 665 ವಿದ್ಯಾರ್ಥಿಗಳು ತಿಳಿಸಿದ್ದರು. ಆದ್ರೆ ಅದ್ರಲ್ಲಿ 8 ಮಂದಿ ಗೈರು ಹಾಜರಾಗಿದ್ದರು. ಇನ್ನು ಹೊರ ರಾಜ್ಯದಿಂದ ತುಮಕೂರು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವುದಾಗಿ ಹೇಳಿದ್ದ ಐವರು ಹಾಜರಾಗಿದ್ದರು.

ಇನ್ನೊಂದೆಡೆ ಜಿಲ್ಲೆಯ ವಿವಿಧೆಡೆ ಕೊರೊನಾ ಸೋಂಕಿತ ವ್ಯಕ್ತಿಗಳು ಪತ್ತೆಯಾಗಿರುವ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್​ಗಳಾಗಿ ಪರಿವರ್ತಿಸಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಪ್ರದೇಶದಿಂದಲೂ ಐವರು ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.