ETV Bharat / state

ಸಚಿವ ನಾಗೇಶ್​ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಪೊಲೀಸ್​ ವಶಕ್ಕೆ : ಆರಗ ಜ್ಞಾನೇಂದ್ರ

ತಿಪಟೂರಿನಲ್ಲಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಎನ್ಎಸ್​ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

15-accused-arrested-who-tried-to-enter-the-home-of-the-education-minister
ಶಿಕ್ಷಣ ಸಚಿವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಬಂಧನ : ಆರಗ ಜ್ಞಾನೇಂದ್ರ
author img

By

Published : Jun 1, 2022, 9:53 PM IST

ತುಮಕೂರು : ತಿಪಟೂರಿನಲ್ಲಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಎನ್ಎಸ್​ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವರ ಮನೆಗೆ ಏಕಾಏಕಿ ನುಗ್ಗಿದ ಆರೋಪಿಗಳು ಬೆಂಕಿ ಹಾಕಲು ಮುಂದಾಗಿದ್ದರು ಎಂಬ ಬಗ್ಗೆ ಮಾಹಿತಿ ದೊರೆತಿದೆ. ಈ ಘಟನೆಯನ್ನು ಖಂಡಿಸುತ್ತೇನೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಈ ಘಟನೆಯ ಹಿಂದೆ ಯಾರಿದ್ದಾರೋ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 15 ಮಂದಿ ಎನ್ಎಸ್​ಯುಐ ಕಾರ್ಯಕರ್ತರ ಜೊತೆಗೆ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಬಂದಿದ್ದು, ಇದರಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡ ಇದೆ. ದಾವಣಗೆರೆಯಿಂದ NSUI ಉಪಾಧ್ಯಕ್ಷ ಪೈಲ್ವಾನ್ ಅಲಿ ರೆಹಮತ್ ಎಂಬಾತನೂ ಬಂದಿದ್ದು, ಇವರೆಲ್ಲಾ ಮೊದಲೇ ಸಂಚು ರೂಪಿಸಿದ್ದಾರೆ.ಈ ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವರು ಖಡಕ್​ ಎಚ್ಚರಿಕೆ ರವಾನಿಸಿದರು.

ಓದಿ : ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.