ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಉರುಳಿ ಬಿದ್ದು 15 ಮಂದಿಗೆ ಗಾಯಗೊಂಡಿರುವ ಘಟನೆ ತುಮಕೂರು ತಾಲೂಕಿನ ದೇವರ ಹೊಸಹಳ್ಳಿ ಸೇತುವೆ ಬಳಿ ಬುಧವಾರ ಸಂಭವಿಸಿದೆ.
ತುಮಕೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಸುಮಾರು 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಯಾತಸಂದ್ರ ಠಾಣೆ ಪೊಲೀಸರು ತಮ್ಮ ವಾಹನ ಹಾಗೂ ಆ್ಯಂಬುಲೆನ್ಸ್ನಲ್ಲಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್.. ರಸ್ತೆ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ