ತುಮಕೂರು: ಕೋವಿಡ್-19 ಸೋಂಕು ತಡೆಗೆ ಜಿಲ್ಲೆಯಲ್ಲಿ 1,780 ಜನರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. 640 ಜನರನ್ನು ಶಂಕಿತರೆಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ 70 ಜನ ಶಂಕಿತರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಇದುವರೆಗೂ ಜಿಲ್ಲೆಯಾದ್ಯಂತ 3,315 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 3,022 ಜನರ ವರದಿ ನೆಗೆಟಿವ್ ಎಂದು ಬಂದಿದೆ. 253 ಜನರ ವರದಿ ಬಾಕಿ ಇದೆ. 33 ಜನರ ವರದಿಯನ್ನು ತಿರಸ್ಕರಿಸಿ, ಮರು ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 7 ಜನರಲ್ಲಿ ಸೋಂಕ ಇರುವುದು ಪತ್ತೆಯಾಗಿದೆ ಎಂದರು.
ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖರಾಗಿದ್ದಾರೆ. ಇನ್ನು ನಾಲ್ವರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.