ತುಮಕೂರು:ಮದುವೆ ಮಾಡಿಕೊಳ್ಳಲು ಒಪ್ಪಿಕೊಳ್ಳದ ಯುವತಿಗೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಯುವಕನಿಗೆ ನ್ಯಾಯಾಲಯ ಎರಡು ವರ್ಷ ಕಠಿಣ ಸಜೆ ವಿಧಿಸಿದೆ.
25 ವರ್ಷ ವಯಸ್ಸಿನ ಯುವಕನೊಬ್ಬ ಯುವತಿಗೆ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರಿನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಈ ರೀತಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಯುವಕನ ವಿರುದ್ಧ ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿತ್ತು.