ತುಮಕೂರು: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗದ್ದಿಗೇರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಬರಗೂರು ಗ್ರಾಪಂ ವ್ಯಾಪ್ತಿಯ ಗದ್ದಿಗೇರಹಟ್ಟಿ ಗ್ರಾಮದ 20 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಗ್ರಾಮಕ್ಕೆ ಸರಬರಾಜು ಆಗುವ ಓವರ್ ಟ್ಯಾಂಕ್ಗೆ ಕಲುಷಿತ ನೀರು ಸೇರಿದ್ದರಿಂದ ಸಮಸ್ಯೆ ಉದ್ಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗ್ರಾಮಕ್ಕೆ ನೀರು ಸರಬರಾಜು ಆಗುವ ಪೈಪ್ಲೈನ್ ಒಡೆದು ಹೋಗಿದ್ದು, ಇದನ್ನು ಸರಿಪಡಿಸದೇ ಇರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ: ನಾಲ್ವರು ಸಹೋದ್ಯೋಗಿಗಳ ಕೊಂದು ತಾನೂ ಸಾವಿಗೀಡಾದ ಬಿಎಸ್ಎಫ್ ಯೋಧ
ಕಳೆದ ಮೂರು ದಿನಗಳಿಂದ ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಗ್ರಾಮದಲ್ಲೇ ವೈದ್ಯರ ತಂಡ ಬೀಡುಬಿಟ್ಟು ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದೆ. ಅಲ್ಲದೇ, ಈ ಸಂಬಂಧ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.