ETV Bharat / state

ತುಮಕೂರಿನಲ್ಲಿ 223 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 6,885ಕ್ಕೆ ಏರಿಕೆ

author img

By

Published : Sep 5, 2020, 5:32 PM IST

ತುಮಕೂರು ಜಿಲ್ಲೆಯಲ್ಲಿ ನಿನ್ನೆ 223 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 239 ಮಂದಿ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Tumkur
Tumkur

ತುಮಕೂರು: ತುಮಕೂರು ಜಿಲ್ಲೆಯಲ್ಲಿ ನಿನ್ನೆ 223 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 6,885 ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲೂಕಿನಲ್ಲಿ 84 ಮಂದಿಗೆ ಸೋಂಕು ದೃಢವಾಗಿದ್ದು, ತಿಪಟೂರು ತಾಲೂಕಿನಲ್ಲಿ 39, ಪಾವಗಡ ತಾಲೂಕಿನಲ್ಲಿ 22, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 16, ತುರುವೇಕೆರೆ ತಾಲೂಕಿನಲ್ಲಿ 12, ಶಿರಾದಲ್ಲಿ 10, ಕುಣಿಗಲ್ ಮತ್ತು ಮಧುಗಿರಿ ತಾಲೂಕಿನಲ್ಲಿ ತಲಾ 11, ಗುಬ್ಬಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 9 ಮಂದಿಯಲ್ಲಿ ಸೋಂಕು ಕಂಡುಬಂದಿದೆ.

ನಿನ್ನೆ 239 ಮಂದಿ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 4,943 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನು 1760 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 173 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲಾ ಕೋವಿಡ್-19 ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳ ಐಸಿಯುನಲ್ಲಿ ತಲಾ 14 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.