ETV Bharat / state

ತುಮಕೂರಿನಲ್ಲಿ ಇಂದು 24 ಕೊರೊನಾ ಕೇಸ್​ ಪತ್ತೆ: ಮತ್ತೊಂದು ಬಲಿ - Corona Positive Cases

ಇಂದು ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ 24 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಸೋಂಕಿತರ ಸಂಖ್ಯೆ 292ಕ್ಕೆ ಏರಿಕೆಯಾಗಿದೆ.

24 Corona Positive Cases detected in tumkur
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ
author img

By

Published : Jul 7, 2020, 8:15 PM IST

ತುಮಕೂರು: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ತುಮಕೂರು ತಾಲೂಕು ನಾಗವಲ್ಲಿ ಗ್ರಾಮದ 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಜುಲೈ 6ರಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಅವರು ದಾಖಲಾಗಿದ್ದು, ಇಂದು ಮೃತಪಟ್ಟಿದ್ದಾರೆ. ಮೃತರ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಮಂದಿ ಮತ್ತು 12 ಮಂದಿ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ

ಇಂದು ಹೊಸದಾಗಿ ಜಿಲ್ಲೆಯಲ್ಲಿ 24 ಪ್ರಕರಣಗಳು ದೃಢವಾಗಿದ್ದು, ಸೋಂಕಿತರ ಸಂಖ್ಯೆ 292ಕ್ಕೆ ಏರಿಕೆಯಾಗಿದೆ. ತುಮಕೂರು 1, ಪಾವಗಡ 14, ಗುಬ್ಬಿ 3, ಕೊರಟಗೆರೆ 2, ಕುಣಿಗಲ್, ಮಧುಗಿರಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲೂಕಿನಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಇನ್ನೂ 215 ಮಂದಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ 67 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.