ತುಮಕೂರು : ಜಿಲ್ಲೆಯಲ್ಲಿಂದು 25 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ತುಮಕೂರು ತಾಲೂಕಿನ 15 ಮಂದಿ, ಪಾವಗಡ ತಾಲೂಕಿನಲ್ಲಿ ಏಳು ಮಂದಿ, ಮಧುಗಿರಿ ತಾಲೂಕಿನ ಇಬ್ಬರು, ಕೊರಟಗೆರೆ ತಾಲೂಕಿನ ಓರ್ವ ವ್ಯಕ್ತಿ ಸೇರಿ 25 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ 437 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇಂದು 37 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 813ಕ್ಕೆ ಏರಿಕೆಯಾಗಿದೆ. ಸದ್ಯ 348 ಸೋಂಕಿತರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಈವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.