ETV Bharat / state

ತುಮಕೂರಿನಲ್ಲಿ ನಾಲ್ವರಿಗೆ ಕೊರೊನಾ: ಸೋಂಕಿತರ ಸಂಖ್ಯೆ 57ಕ್ಕೇರಿಕೆ

author img

By

Published : Jun 24, 2020, 9:22 AM IST

ತುಮಕೂರು ಜಿಲ್ಲೆಯಲ್ಲಿ ಮತ್ತೆ ನಾಲ್ವರು ವ್ಯಕ್ತಿಗಳಲ್ಲಿ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 57ಕ್ಕೇರಿಕೆಯಾಗಿದೆ. ಓರ್ವ ಸೋಂಕಿತ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ತುಮಕೂರಿನಲ್ಲಿ ನಾಲ್ವರಿಗೆ ಸೋಂಕು
ತುಮಕೂರಿನಲ್ಲಿ ನಾಲ್ವರಿಗೆ ಸೋಂಕು

ತುಮಕೂರು: ಜಿಲ್ಲೆಯಲ್ಲಿ ಇಂದು ನಾಲ್ವರು ವ್ಯಕ್ತಿಗಳಲ್ಲಿ ಸೋಂಕು ದೃಢವಾಗಿದ್ದು,ಸೋಂಕಿತರ ಸಂಖ್ಯೆ 57ಕ್ಕೇರಿಕೆಯಾಗಿದೆ. ಅಷ್ಟೇ ಅಲ್ಲದೆ, ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಪುಣೆಯಿಂದ ತುಮಕೂರು ಜಿಲ್ಲೆ ಮಧುಗಿರಿಗೆ ಬಂದಿದ್ದ 31 ವರ್ಷದ ಪುರುಷನಲ್ಲಿ ಸೋಂಕು ದೃಢವಾಗಿದೆ. ಟಿಎಂಕೆ 53 ರೋಗಿ ಸಂಖ್ಯೆ ಎಂದು ಗುರುತಿಸಲಾಗಿದೆ. ಜೂನ್ 21ರಂದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಬಂದಾಗ ಗಂಟಲು ಮಾದರಿಯನ್ನು ತೆಗೆಯಲಾಗಿತ್ತು. ತುಮಕೂರಿನ ಕೋವಿಡ್ 19 ಪರೀಕ್ಷೆ ಘಟಕದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ವ್ಯಕ್ತಿಯನ್ನು ಕೋವಿಡ್ 19 ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಅದೇ ರೀತಿ ದ್ವಿತೀಯ ಸಂಪರ್ಕದಲ್ಲಿದ್ದ ನಾಲ್ವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ತುಮಕೂರಿನಲ್ಲಿ ನಾಲ್ವರಿಗೆ ಸೋಂಕು

ಮಧುಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ 29 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದ್ದು, ಈತನನ್ನು ಟಿಎಂಕೆ 54 ರೋಗಿ ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಈ ವ್ಯಕ್ತಿಯು ಜೂನ್ 21ರಂದು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಗಂಟಲು ದ್ರವ ಮಾದರಿ ತೆಗೆಯಲಾಗಿತ್ತು. ತುಮಕೂರಿನ ಕೋವಿಡ್ 19 ಪರೀಕ್ಷೆ ಘಟಕದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ವ್ಯಕ್ತಿಯನ್ನು ಕೋವಿಡ್ 19 ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪ್ರಯಾಣದ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ. ಹೀಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 28 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. 12 ಮಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಕೊರಟಗೆರೆ ತಾಲೂಕು ಕೆ ನಾಗೇನಹಳ್ಳಿ ಗ್ರಾಮದ 26 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. ಟಿಎಂಕೆ 55 ರೋಗಿ ಸಂಖ್ಯೆ ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮಹಿಳೆ ಜೂನ್ 20 ರಂದು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ಗಂಟಲು ದ್ರವ ಮಾದರಿಯನ್ನು ತೆಗೆಯಲಾಗಿತ್ತು. ತುಮಕೂರಿನ ಕೋವಿಡ್ 19 ಪರೀಕ್ಷೆ ಘಟಕದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ಮಹಿಳೆಯನ್ನು ಕೋವಿಡ್ 19 ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪ್ರಯಾಣದ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ. ಹೀಗೆ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 58 ಮಂದಿಯನ್ನು ಹೊಳವನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆ ಮತ್ತು ಬಜ್ಜನಹಳ್ಳಿಯಲ್ಲಿರುವ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಈತನ ದ್ವಿತೀಯ ಸಂಪರ್ಕದಲ್ಲಿದ್ದ ನೂರು ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಿಂದ ಬಂದಿದ್ದ 21 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಟಿಎಂಕೆ 56 ರೋಗಿ ಸಂಖ್ಯೆ ಎಂದು ಗುರುತಿಸಲಾಗಿದೆ. ಈತ ಚಿಕ್ಕನಾಯಕನಹಳ್ಳಿ ತಾಲೂಕು ಗೊಲ್ಲರಹಟ್ಟಿ ಗೋಡೆಕೆರೆಗೆ ಬಂದಿದ್ದನು. ಜ್ವರ ಮತ್ತು ತಲೆ ನೋವಿನಿಂದ ಬಳಲುತ್ತಿದ್ದ ಈ ವ್ಯಕ್ತಿಯು ಜೂನ್ 20ರಂದು ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ಬಂದ ವೇಳೆ ಗಂಟಲು ಮಾದರಿಯನ್ನು ತೆಗೆಯಲಾಗಿತ್ತು. ತುಮಕೂರಿನ ಕೋವಿಡ್ 19 ಪರೀಕ್ಷೆ ಘಟಕದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿಯನ್ನು ಕೋವಿಡ್ 19 ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈತನ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ ಎಂಟು ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕಿತ ರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ.

ಈಗಾಗಲೇ ಒಟ್ಟು 39 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದು, ಇನ್ನು 15 ಮಂದಿ ಸೋಂಕಿತರು ಕೋವಿಡ್19 ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 14,954 ಮಂದಿಯಲ್ಲಿ ಗಂಟಲು ದ್ರವ ಮಾದರಿ ತೆಗೆಯಲಾಗಿದ್ದು, ಅದರಲ್ಲಿ 13,658 ಮಂದಿಯಲ್ಲಿ ನೆಗೆಟಿವ್ ಕಂಡು ಬಂದಿದೆ. 1050 ಮಂದಿಯ ಮಾದರಿಯ ಫಲಿತಾಂಶಕ್ಕಾಗಿ ಜಿಲ್ಲಾಡಳಿತ ನಿರೀಕ್ಷೆಯಲ್ಲಿದೆ. 826 ಮಂದಿಯನ್ನು ಕೋವಿಡ್19 ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.