ತುಮಕೂರು : ಐರನ್ ಮತ್ತು ಫೊಲಿಕ್ ಆ್ಯಸಿಡ್ ಮಿಶ್ರಿತ ಮಾತ್ರೆಗಳನ್ನು ಸೇವಿಸಿ 48 ಶಾಲಾಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಎಸ್.ಕೊಡಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀನಿವಾಸ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದವರಾಗಿದ್ದಾರೆ. ಇಂದು ಬೆಳಗ್ಗೆ ಹಾಗೂ ನಿನ್ನೆ ಐರನ್ ಮತ್ತು ಫೊಲಿಕ್ ಆ್ಯ ಸಿಡ್ ಮಿಶ್ರಿತ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಇಂದು ಬೆಳಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಗುಬ್ಬಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.