ETV Bharat / state

ಪಾವಗಡ ಬಸ್​ ಅಪಘಾತದಲ್ಲಿ 6 ಮಂದಿ ಸಾವು: ಗಂಭೀರ ಗಾಯಗೊಂಡವರಿಗೆ ಬೆಂಗಳೂರಲ್ಲಿ ಚಿಕಿತ್ಸೆ

ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಸಂಭವಿಸಿದ ಖಾಸಗಿ ಬಸ್​ ಅಪಘಾತದಲ್ಲಿ ಇದುವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ.

6-people-died-in-tumakuru-bus-accident
ಪಾವಗಡ ಬಸ್​ ಅಫಘಾತದಲ್ಲಿ 6 ಮಂದಿ ಸಾವು: ಗಂಭೀರ ಗಾಯಗೊಂಡವರಿಗೆ ಬೆಂಗಳೂರಲ್ಲಿ ಚಿಕಿತ್ಸೆ
author img

By

Published : Mar 21, 2022, 11:03 AM IST

Updated : Mar 21, 2022, 2:55 PM IST

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಸಂಭವಿಸಿದ ಖಾಸಗಿ ಬಸ್​ ಅಪಘಾತದಲ್ಲಿ ಇದುವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ವೈ.ಎನ್. ಹೊಸಕೋಟೆ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿತ್ತು. ಈ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಗಂಭೀರ ಗಾಯಗೊಂಡವರಿಗೆ ಬೆಂಗಳೂರಲ್ಲಿ ಚಿಕಿತ್ಸೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ, ಉಕ್ರೇನ್​ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಯುದ್ಧಪೀಡಿತ ಪ್ರದೇಶದಿಂದ ಮೃತದೇಹ ತರುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಮುಂದಿನ 12 ಗಂಟೆಯಲ್ಲಿ ತೀವ್ರತೆ ಪಡೆದುಕೊಳ್ಳಲಿದೆ ಅಸನಿ ಚಂಡಮಾರುತ.. ಕರಾವಳಿ ಪ್ರದೇಶಗಳಿಗೆ ಎಚ್ಚರಿಕೆ!

Last Updated : Mar 21, 2022, 2:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.